ಹಾವೇರಿ: ತನ್ನ ಜೊತೆ ಮಲಗುವಂತೆ ಮಹಿಳೆಗೆ ಒತ್ತಡ; ಖಾಸಗಿ ಫೋಟೋ, ವಿಡಿಯೋ ಲೀಕ್ ಬೆದರಿಕೆ; ಆರೋಪಿ ಬಂಧನ
ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಹಾವೇರಿಯ ಬಸವೇಶ್ವರ ನಗರದ ನಿವಾಸಿ ಸಚಿನ್ ದಾನಪ್ಪನವರ್ ಮತ್ತು ಆತನ ಪತ್ನಿ ಸುಪ್ರಿಯಾ ಸಚಿನ್ ದಾನಪ್ಪನವರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಜುಲೈ 22ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನ ಪ್ರಕಾರ, ಜುಲೈ 12ರ ರಾತ್ರಿ ಸಚಿನ್ ಮಹಿಳೆ ತನ್ನ ಲೈಂಗಿಕ ಬೇಡಿಕೆಗಳನ್ನು ಪೂರೈಸದಿದ್ದರೆ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಫೋನ್‌ಪೇ ಮೂಲಕ ದೂರುದಾರಳ ಪತಿಗೆ ಅಶ್ಲೀಲ ಫೋಟೋವೊಂದನ್ನು ಕಳುಹಿಸಿದ್ದಾನೆ ಎಂಬ ಆರೋಪವೂ ಇದೆ.
ಸಚಿನ್ ಫೋಟೋಗಳು ಮತ್ತು ವೀಡಿಯೊಗಳನ್ನು ಬಳಸಿ ತನಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಕುಟುಂಬ ಸದಸ್ಯರು ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೇ ಹುಬ್ಬಳ್ಳಿಯಲ್ಲಿ ಓದುತ್ತಿರುವ ಸಂತ್ರಸ್ತೆಯ ಮಗಳನ್ನು ಅವಮಾನಿಸುವುದಾಗಿಯೂ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಸಚಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾದ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



