ರಾಜ್ಯ

ಈ ಬಾರಿ ದಸರಾ ಉದ್ಘಾಟನೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರು: ಸಿಎಂ ನಿರ್ಧಾರವೇ ಅಂತಿಮ ಎಂದ ಯತೀಂದ್ರ

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ ಎನ್ನುವ ಕುತೂಹಲದ ಮಧ್ಯೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರ ಹೆಸರು ಕೇಳಿ ಬರುತ್ತಿದೆ.

ಈ ಬಾರಿ ದಸರಾ ಉದ್ಘಾಟನೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರು: ಸಿಎಂ ನಿರ್ಧಾರವೇ ಅಂತಿಮ ಎಂದ ಯತೀಂದ್ರ
ಯತೀಂದ್ರ ಸಿದ್ದರಾಮಯ್ಯ
Published On :

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026 ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಆಯ್ಕೆ ಮಾಡಲಿದ್ದಾರೆ. ಅವರ ನಿರ್ಧಾರವೇ ಅಂತಿಮ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ ಎನ್ನುವ ಕುತೂಹಲದ ಮಧ್ಯೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರ ಹೆಸರು ಕೇಳಿ ಬರುತ್ತಿದೆ.

ಇಂದು ಮೈಸೂರಿನಲ್ಲಿ ದಸರಾ ಸಿದ್ಧತಾ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಅವರು, ದಸರಾ ಉದ್ಘಾಟನೆ ವಿಚಾರದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ನಿರ್ಧಾರ ಅಂತಿಮ. ನಾವೆಲ್ಲರೂ ಉದ್ಘಾಟಕರ ಆಯ್ಕೆಯನ್ನು ಅವರಿಗೆ ಬಿಟ್ಟಿದ್ದೇವೆ ಎಂದರು.

ಶಾಸಕರು ಒಂದಷ್ಟು ಸಲಹೆ ಕೊಟ್ಟಿದ್ದಾರೆ. ಅಂತಿಮ ನಿರ್ಧಾರ ಸಿಎಂ ಅವರದ್ದೇ ಆಗಿರುತ್ತದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ್ ಹೆಸರು ಮುಂಚೂಣಿಯಲ್ಲಿದೆ.

ಇನ್ನೂ ಈ ಬಾರಿ ದಸರಾದಲ್ಲಿ 17 ಉಪಸಮಿತಿಗಳನ್ನು ರಚನೆ ಮಾಡಲು ನಿರ್ಧಾರ ಮಾಡಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಅವರು ತಿಳಿಸಿದ್ದಾರೆ.

ಅಕ್ಟೋಬರ್ 11ಕ್ಕೆ ಉದ್ಘಾಟನೆ ಹಾಗೂ ಅಕ್ಟೋಬರ್ 21ಕ್ಕೆ ಜಂಬೂ ಸವಾರಿ ನಡೆಯಲಿದೆ.

ಕಂಬಳದ ಬಗ್ಗೆ ಫೈನಲ್ ಆಗಿಲ್ಲ

ಇದೇ ವೇಳೆ ಮೆಸೂರು ದಸರಾದಲ್ಲಿ ಕಂಬಳ ನಡೆಸುವ ವಿಚಾರವಾಗಿ ಮಾತನಾಡಿದ ಸಚಿವರು, ಕಂಬಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಕಂಬಳ ಫೈನಲ್ ಆದರೆ ಇನ್ನೊಂದು ಉಪಸಮಿತಿ ಆಗುತ್ತದೆ. ಕಂಬಳ ಮಾಡಿದರೆ ಸಾತಗಳ್ಳಿಯಲ್ಲೇ ಮಾಡುತ್ತಾರೆ. ಆದ್ರೆ ಸಿಎಂ ಇನ್ನೂ ಆ ಬಗ್ಗೆ ಫೈನಲ್ ಮಾಡಿಲ್ಲ. ಎಲ್ಲವೂ ಕೂಡ ಅವರ ಕೈನಲ್ಲಿ ಇದೆ ಎಂದು ಹೇಳಿದ್ದಾರೆ.

ಪಾಸ್​​​ನಲ್ಲಿ ಗೊಂದಲವಾಗದಂತೆ ಸೂಚನೆ

ಇನ್ನು ದಸರಾ ಪಾಸ್ ಬಗ್ಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ದಸರಾ ಪಾಸ್ ವಿಚಾರವಾಗಿ ಕಳೆದ ಬಾರಿ ಗೊಂದಲ ಇತ್ತು. ಈ ಬಾರಿ ಯಾವುದೇ ಗೊಂದಲ ಆಗಬಾರದು ಅಂತ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಪಾಸ್ ವಿಚಾರದಲ್ಲಿ ಸಮಸ್ಯೆ ಆಗದಂತೆ ಕ್ರಮ ಆಗುತ್ತದೆ. ಪಾಸ್ ಬೇಡ ಎಂದು ಶಾಸಕರು ಹೇಳಿದ್ದಾರೆ. ಈ ವಿಚಾರವನ್ನು ಸಿಎಂಗೆ ತಿಳಿಸಿದ್ದು, ಆ ಬಗ್ಗೆ ಸೂಕ್ತ ತೀರ್ಮಾನ ಆಗುತ್ತದೆ. ಗೋಲ್ಡ್ ಕಾರ್ಡ್ ಜನರಿಗೆ ಮಾತ್ರ ಲಭ್ಯವಾಗಲಿದೆ. ಈ ಬಾರಿ ಗೋಲ್ಡ್ ಆಸನಗಳು ಎಷ್ಟಿರುತ್ತದೆ ಅಷ್ಟೇ ಆಸನಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.