ರಾಜ್ಯ

Footpath ಒತ್ತುವರಿಯಿಂದ ಜನರಿಗೆ ಸಂಕಷ್ಟ: ಹೈಕೋರ್ಟ್ ಮಧ್ಯಪ್ರವೇಶ; ಸರ್ಕಾರ, NHAI, BMRCLಗೆ ನೋಟಿಸ್ ಜಾರಿ!

ಅರ್ಜಿಯಲ್ಲಿ, ಫುಟ್‌ಪಾತ್‌ಗಳು ಒತ್ತುವರಿಯಾಗಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ವಾಹನ ದಟ್ಟಣೆಯೂ ಹೆಚ್ಚುತ್ತಿದೆ ಎಂದು ತಿಳಿಸಲಾಗಿದೆ.

Footpath ಒತ್ತುವರಿಯಿಂದ ಜನರಿಗೆ ಸಂಕಷ್ಟ: ಹೈಕೋರ್ಟ್ ಮಧ್ಯಪ್ರವೇಶ; ಸರ್ಕಾರ, NHAI, BMRCLಗೆ ನೋಟಿಸ್ ಜಾರಿ!
ಹೈಕೋರ್ಟ್
Published On :

ಬೆಂಗಳೂರು: ಬೆಂಗಳೂರಿನ ತುಮಕೂರು–ಬೆಂಗಳೂರು ಸೇವಾ ರಸ್ತೆಯಲ್ಲಿನ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕುರಿತು ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿದೆ.

ಟಿ. ದಾಸರಹಳ್ಳಿ ಎನ್‌ಎಚ್-4 ನಾಗರಿಕರು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ನಗರದ ಟಿ. ದಾಸರಹಳ್ಳಿಯಿಂದ ಜಾಲಹಳ್ಳಿ ಕ್ರಾಸ್‌ವರೆಗೆ ಇರುವ ತುಮಕೂರು–ಬೆಂಗಳೂರು ಸೇವಾ ರಸ್ತೆಯ ಫುಟ್‌ಪಾತ್‌ಗಳನ್ನು ಅನಧಿಕೃತ ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದೆ.

ಅರ್ಜಿಯಲ್ಲಿ, ಫುಟ್‌ಪಾತ್‌ಗಳು ಒತ್ತುವರಿಯಾಗಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ವಾಹನ ದಟ್ಟಣೆಯೂ ಹೆಚ್ಚುತ್ತಿದೆ ಎಂದು ತಿಳಿಸಲಾಗಿದೆ.

ಅಲ್ಲದೆ, ಸೇವಾ ರಸ್ತೆಯ ಒಂದು ಭಾಗವನ್ನು ಬೀದಿಬದಿ ವ್ಯಾಪಾರಿಗಳು ಅತಿಕ್ರಮಿಸಿರುವ ಕಾರಣ ಶಾಲಾ ಬಸ್‌ಗಳು, ಆಂಬುಲೆನ್ಸ್‌ಗಳು ಹಾಗೂ ಇತರೆ ವಾಹನಗಳು ಟ್ರಾಫಿಕ್‌ನಲ್ಲಿ ಸಿಲುಕುತ್ತಿವೆ.

ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಪ್ರತಿದಿನ ಶಾಲೆ ಮತ್ತು ಕಚೇರಿಗಳಿಗೆ ಸಮಯಕ್ಕೆ ತಲುಪಲು ಪರದಾಡುವಂತಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಾರ್ಚ್ 2ರಂದು ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ, ಫುಟ್‌ಪಾತ್ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.