ರಾಜ್ಯ

ಬೆಂಗಳೂರಿನಲ್ಲಿ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್: ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಜಾಗತಿಕ ಹೆಜ್ಜೆ- ಎಂ.ಬಿ ಪಾಟೀಲ್

ಬೆಂಗಳೂರು ಕ್ಯಾಂಪಸ್‌ನಲ್ಲಿ ಬಿಸಿನೆಸ್, ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟಿಂಗ್ ವಿಷಯಗಳಲ್ಲಿ ಪದವಿ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ ಎಂದು ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್: ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಜಾಗತಿಕ ಹೆಜ್ಜೆ- ಎಂ.ಬಿ ಪಾಟೀಲ್
ಸಚಿವ ಎಂಬಿ ಪಾಟೀಲ್
Published On :

ಬೆಂಗಳೂರು: ಜಾಗತಿಕ ಮಟ್ಟದಲ್ಲಿ 5-ಸ್ಟಾರ್ ಸ್ಥಾನಮಾನ ಪಡೆದಿರುವ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯವು, ಬೆಂಗಳೂರಿನಲ್ಲಿ ತನ್ನ ಕ್ಯಾಂಪಸ್ ಆರಂಭಿಸುತ್ತಿದ್ದು, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಜಾಗತಿಕ ಹೆಜ್ಜೆಯಾಗಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯ(Lancaster University)ದ ಅಸೋಸಿಯೇಟ್ ಡೀನ್ ಮಾರ್ಕ್ ಸ್ಟೀವನ್ಸನ್ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಮಹತ್ವದ ಮಾತುಕತೆ ನಡೆಸಿದೆ. ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯವು, ಬೆಂಗಳೂರಿನಲ್ಲಿ ತನ್ನ ಕ್ಯಾಂಪಸ್ ಆರಂಭಿಸುತ್ತಿದೆ. ಮುಂದಿನ ದಿನಗಳಲ್ಲಿ #KWINCity ಯಲ್ಲೂ ತನ್ನ ಕ್ಯಾಂಪಸ್ ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಕ್ಯಾಂಪಸ್‌ನಲ್ಲಿ ಬಿಸಿನೆಸ್, ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟಿಂಗ್ ವಿಷಯಗಳಲ್ಲಿ ಪದವಿ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯುನೈಟೆಡ್ ಕಿಂಗ್ಡಮ್‌ ನಲ್ಲಿ ಅನುಸರಿಸಲಾಗುತ್ತಿರುವ ಗುಣಮಟ್ಟದ ಪಠ್ಯಕ್ರಮವನ್ನು ಇಲ್ಲಿಯೂ ಅಳವಡಿಸಿಕೊಳ್ಳಲಾಗುವುದು. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣವನ್ನು ಸ್ವದೇಶದಲ್ಲಿಯೇ ಪಡೆಯುವ ಅವಕಾಶ ದೊರೆಯಲಿದ್ದು, ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ಸಹಭಾಗಿತ್ವ ಮತ್ತಷ್ಟು ಬಲಗೊಳ್ಳಲಿದೆ. ಇದರೊಂದಿಗೆ ಬೆಂಗಳೂರು ಜಾಗತಿಕ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಇನ್ನಷ್ಟು ಬೆಳೆಯುವ ವಿಶ್ವಾಸವಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.