ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್ 10 ಚರ್ಚಾ ವಿಷಯಗಳಿವು
ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ.

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭವಾಗಲಿದ್ದು, ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಮಂಗಳವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 13 ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಅಧಿವೇಶನ ನಡೆಯಲಿದೆ.
ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ. ಸಂಪುಟದಲ್ಲಿ ಶೇಕಡಾ 75 ರಷ್ಟು ಮಂದಿ ಹೊಸಬರು, ಶೇಕಡಾ 25 ರಷ್ಟು ಹಳಬರು ಇರಲಿದ್ದಾರೆ ಎನ್ನಲಾಗಿದೆ.
ಚರ್ಚೆಯಾಗಲಿರುವ ಪ್ರಮುಖ ವಿಷಯಗಳು
ಬಿಡದಿ ಟೌನ್‌ಶಿಪ್ ಯೋಜನೆ
ಕೆಪಿಎಸ್‌ಸಿ ನೇಮಕಾತಿ ಹಗರಣ
ಬರಗಾಲ, ಬರ ಪರಿಹಾರ
ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಮತ್ತು ಪರಿಷ್ಕರಣೆ
ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ.
ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ.
ಆರ್‌ಎಸ್‌ಎಸ್ ನೋಂದಣಿ.
ರಾಮಮಂದಿರ ದೇಣಿಗೆ ಕಳ್ಳತನ.
ನೀಟ್ ಹಗರಣ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



