ಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ
ಸಮಾಧಿ ಸ್ಥಳದಲ್ಲಿದ್ದ ಎಚ್ ಡಿ ದೇವೇಗೌಡ ಅವರು ಪತ್ನಿಯನ್ನು ನೆನದು ಭಾವುಕರಾದರು. ಇದಕ್ಕು ಮುನ್ನ ಹೊಳೆನರಸೀಪುರದ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ನಡೆದ ವಿಧಿ-ವಿಧಾನದ ವೇಳೆಯೂ ದೇವೇಗೌಡರು ಕಣ್ಣೀರಿಟ್ಟರು.

ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ.
ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅವರ ಕುಟುಂಬದ ಬಹುತೇಕ ಎಲ್ಲಾ ಸದಸ್ಯರು, ಹಲವು ಗಣ್ಯರು ಹಾಗೂ ಸಾವಿರಾರು ಜನ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
ಸಮಾಧಿ ಸ್ಥಳದಲ್ಲಿದ್ದ ಎಚ್ ಡಿ ದೇವೇಗೌಡ ಅವರು ಪತ್ನಿಯನ್ನು ನೆನದು ಭಾವುಕರಾದರು. ಇದಕ್ಕು ಮುನ್ನ ಹೊಳೆನರಸೀಪುರದ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ನಡೆದ ವಿಧಿ-ವಿಧಾನದ ವೇಳೆಯೂ ದೇವೇಗೌಡರು ಕಣ್ಣೀರಿಟ್ಟರು.
ಚೆನ್ನಮ್ಮ ಅವರ ಸಮಾಧಿಗೆ ಅವರ ನೆಚ್ಚಿನ ಮೈಸೂರು ಮಲ್ಲಿಗೆ ಹೂಗಳನ್ನು ಅರ್ಪಿಸಿದ ಎಚ್.ಡಿ. ದೇವೇಗೌಡರು, ಪೂಜೆ–ಪುನಸ್ಕಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿದರು.
ಚೆನ್ನಮ್ಮ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಸಾವಿರಾರು ಸಂಖ್ಯೆಯಲ್ಲಿ ನೆಂಟರು, ಬಂಧುಗಳು, ಜೆಡಿಎಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸರತಿ ಸಾಲಿನಲ್ಲಿ ಬಂದು ಸಮಾಧಿ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



