ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!
ಕರ್ನಾಟಕದಲ್ಲಿಯೇ ನೀರಿನ ಕೊರತೆಯಿರುವಾಗ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸುವ ಮೂಲಕ, ಈ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿವೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕರ್ನಾಟಕ ಬಂದ್ ಹಾಗೂ ಕಾವೇರಿ ಹೋರಾಟ ಕುರಿತು ಚರ್ಚಿಸಲು ಕನ್ನಡ ಪರ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆದಿವೆ.
ಬೆಳಗ್ಗೆ ಬೆಳಿಗ್ಗೆ 11.30 ಕ್ಕೆ ಸಭೆ ನಡೆಯಲಿದೆ ಎಂದು 'ಕನ್ನಡ ಒಕ್ಕೂಟ'ದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮೇಕೆದಾಟು, ಮಹಾದಾಯಿ ಯೋಜನೆಗಳಲ್ಲಿ ಈಗಾಗಲೇ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ನಡುವೆ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಖಂಡನೀಯ. ಸಿಎಂ ಡಿಕೆ ಶಿವಕುಮಾರ್ ಮುಲಾಜಿಲ್ಲದೇ ಹನಿ ನೀರನ್ನೂ ಬೀಡಬಾರದು. ಕಳ್ಳಮಾರ್ಗದಲ್ಲಿ ಹರಿಸಿದರೆ ಇಡೀ ಸರ್ಕಾರವೇ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿಯೇ ನೀರಿನ ಕೊರತೆಯಿರುವಾಗ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸುವ ಮೂಲಕ, ಈ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ಸಂಘಟನೆಗಳು ವಿರೋಧಿಸಿವೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರನ್ನು (ಒಟ್ಟು ಸುಮಾರು 6 ಟಿಎಂಸಿ ನೀರು) ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ; ಅಲ್ಲದೆ, ಇಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡುವುದರಿಂದ ರಾಜ್ಯದ ಜನರಿಗೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿವೆ.
ಈ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಕರ್ನಾಟಕ ಭೇಟಿಯ ಪ್ರಸ್ತಾವನೆಯ ಕುರಿತು ಚರ್ಚೆ ನಡೆಸುವ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಕನ್ನಡ ಪರ ಸಂಘಟನೆಗಳ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಗುರುವಾರ ರಾಜ್ಯದ ಮನವಿಯನ್ನು ತಿರಸ್ಕರಿಸಿದೆ. ಅಲ್ಲದೆ, ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC)ನೀಡಿದ್ದ ಶಿಫಾರಸನ್ನು ಎತ್ತಿಹಿಡಿದಿದೆ.
ಈ ಆದೇಶದ ವಿರುದ್ಧ ರಾಜಕೀಯ ಪಕ್ಷಗಳು, ರೈತರು ಮತ್ತು ಕನ್ನಡ ಪರ ಸಂಘಟನೆಗಳು ಒಗ್ಗೂಟಿನ ಹೋರಾಟ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆಯಲು ಮುಂದಾಗಿದೆ. ಕರ್ನಾಟಕ ತೀವ್ರ ಬರಗಾಲ ಮತ್ತು ಕುಡಿಯುವ ನೀರಿನ ಸಂಕಷ್ಟವನ್ನು ಎದುರಿಸುತ್ತಿದ್ದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ವಿರೋಧಿಸಿ ಕರ್ನಾಟಕ ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಮುಂದಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



