ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಬೆಚ್ಚಿಬಿದ್ದ ಕುಂದಾಪುರ
ಇಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಬಾರ್ಕೂರು-ಕಚ್ಚೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್(45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಇಡೀ ಕರಾವಳಿ ಬೆಚ್ಚಿ ಬಿದ್ದಿದೆ.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಬಾರ್ಕೂರು-ಕಚ್ಚೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್(45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಸ್ಕರೇನಸ್ ಅವರು ಅವರ ಕಾರಿನ ಬಳಿ ಶವವಾಗಿ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡೇಟಿನ ಗಾಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗುಂಡಿನ ದಾಳಿ ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ದಾಳಿಕೋರರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ತನಿಖಾಧಿಕಾರಿಗಳು ಪ್ರಕರಣವನ್ನು ಹಲವು ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



