ರಾಜ್ಯ

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ
ಗಾಯತ್ರಿ ಶಾಂತೇಗೌಡ - ಎಂ.ಕೆ.ಪ್ರಾಣೇಶ್ — Online Desk
Published On :

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿದ್ದ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಇದರಿಂದಾಗಿ ಹಾಲಿ ಬಿಜೆಪಿ ಸದಸ್ಯ ಹಾಗೂ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ. ಪ್ರಾಣೇಶ್ ಅವರಿಗೆ ಹಿನ್ನಡೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದರ ಹಿನ್ನೆಲೆ?

2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರು 6 ಮತಗಳಿಂದ ಗೆದ್ದಿದ್ದರು. ಆದರೆ, ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಆಕ್ಷೇಪಿಸಿ ಗಾಯತ್ರಿ ಅವರು ಹೈಕೋರ್ಟ್ ಮೆರೆ ಹೋಗಿದ್ದರು. ಈ ವೇಳೆ, ಹೈಕೋರ್ಟ್ ಆದೇಶದ ಅನ್ವಯ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಎಣಿಕೆಗೆ ಸೂಚಿಸಿತ್ತು.

ಇದನ್ನ ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಅಲ್ಲೂ ಕೂಡ ಪ್ರಾಣೇಶ್ ಅವರಿಗೆ ಹಿನ್ನಡೆ ಆಗಿದ್ದು, ಸುಪ್ರೀಂ ಕೋರ್ಟ್ ಮನವಿಯನ್ನ ವಜಾ ಮಾಡಿತ್ತು. ಜೊತೆಗೆ ಮರು ಎಣಿಕೆಗೆ ಸೂಚನೆ ನೀಡಿತ್ತು.

ಮುಂದುವರೆದು, ನ್ಯಾಯಾಲಯದ ಆದೇಶದ ಅನ್ವಯ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಹೊರತುಪಡಿಸಿ ನಡೆದ ಮರು ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಜಯಗಳಿಸಿರುವುದಾಗಿ ನ್ಯಾ. ಎಸ್. ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆದೇಶ ನೀಡಿತ್ತು. ಇದರೊಂದಿಗೆ, ಗಾಯತ್ರಿ ಶಾಂತೇಗೌಡ ಅವರಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಲು ಇನ್ನು ಒಂದೂವರೆ ವರ್ಷಗಳ ಅವಧಿ ಬಾಕಿ ಇದೆ.

ಏತನ್ಮಧ್ಯೆ, ನ್ಯಾಯಾಲಯವು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರಮಾಣವಚನ ಬೋಧಿಸುವಂತೆ ವಿಧಾನ ಪರಿಷತ್ ಸಭಾಪತಿಗಳಿಗೆ ಸೂಚನೆ ನೀಡಿದೆ. ಈ ತೀರ್ಪಿನಿಂದಾಗಿ 75 ಸದಸ್ಯರ ಬಲದ ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.