ರಾಜ್ಯ

ಕಾವೇರಿ ನೀರು ಹಂಚಿಕೆ ವಿವಾದ: AC ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ- ಹೆಚ್.ಡಿ ಕುಮಾರಸ್ವಾಮಿ; Video

ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ.

ಕಾವೇರಿ ನೀರು ಹಂಚಿಕೆ ವಿವಾದ: AC ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ- ಹೆಚ್.ಡಿ ಕುಮಾರಸ್ವಾಮಿ; Video
ಎಚ್ ಡಿ ಕುಮಾರಸ್ವಾಮಿ
Published On :

ಹಾಸನ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ದೆಹಲಿಯ ಎಸಿ ರೂಮ್‌ ಗಳಲ್ಲಿ ಕೂತು ಈ ನಿರ್ಧಾರವನ್ನ ತೆಗೆದುಕೊಳ್ಳುವ ಬದಲು, ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ ಎಂದು ಸಲಹೆ ನೀಡಿದರು.

ಕರ್ನಾಟಕದಲ್ಲಿ ಸದ್ಯ ಲಭ್ಯವಿರುವ 54ರಿಂದ 55 ಟಿಎಂಸಿ ನೀರಲ್ಲಿ, 10 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ 44 ಟಿಎಂಸಿಯಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿಗಾಗಿ 30 ಟಿಎಂಸಿ ಮತ್ತು ಪರಿಸರ ಸಂರಕ್ಷಣೆಗೆ 10 ಟಿಎಂಸಿ ಅಗತ್ಯವಿದೆ.

ಇಂತಹ ಸಂದರ್ಭದಲ್ಲಿ, ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಹೆಚ್ ಡಿಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.