ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್ ಜಾರಕಿಹೊಳಿ ಸಹಿ ಸಂಗ್ರಹ: ಫೇಸ್‌ಬುಕ್ ಪೇಜ್ ಅಡ್ಮಿನ್‌ಗಳ ವಿರುದ್ಧ FIR
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿತ್ತು

ಬೆಳಗಾವಿ: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬವರು ದೂರು ದಾಖಲಿಸಿದ್ದಾರೆ. ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ "ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ" ಎಂಬ ಗಂಭೀರ ಆರೋಪ ಮಾಡಲಾಗಿತ್ತು.
ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದರು. ಹೀಗಾಗಿ ಸತೀಶ್ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್‌ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರನ್ನು ಸ್ವೀಕರಿಸಿರುವ ಬೆಳಗಾವಿ ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ನಕಲಿ ಫೇಸ್‌ಬುಕ್ ಖಾತೆಯ ಹಿಂದಿರುವ ವ್ಯಕ್ತಿಗಳು ಯಾರು? ಇದರ ಹಿಂದಿರುವ ಉದ್ದೇಶವೇನು? ಎಂಬ ಬಗ್ಗೆ ತಾಂತ್ರಿಕ ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



