'ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರುವ ಕಾಲ ಇದಲ್ಲ': Cockroach Janta Party ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ
ಸಾಲ ತೀರಿಸಲಾಗದೆ ದೇಶದ ಚಿನ್ನವನ್ನು ಅಡವಿಟ್ಟ ಕಾಲವೊಂದಿತ್ತು. ಆದರೆ, ಇಂದು ಭಾರತ 60 ರಾಷ್ಟ್ರಗಳಿಗೆ ಸಾಲ ನೀಡುತ್ತಿದೆ ಎಂದು ಹೇಳಿದರು.

ಮಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ನಡೆದಿದೆ. ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರುವ ಕಾಲ ಇದಲ್ಲ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಆಯೋಜಿಸಿರುವ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದ ಅವರು, ಸಾಲ ತೀರಿಸಲಾಗದೆ ದೇಶದ ಚಿನ್ನವನ್ನು ಅಡವಿಟ್ಟ ಕಾಲವೊಂದಿತ್ತು. ಆದರೆ, ಇಂದು ಭಾರತ 60 ರಾಷ್ಟ್ರಗಳಿಗೆ ಸಾಲ ನೀಡುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ 1.5 ಲಕ್ಷ ದಲಿತ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳು ಹಾಸ್ಟೆಲ್ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವರು ಶಾಲೆ ತೊರೆದಿದ್ದಾರೆ. ಪರಿಶಿಷ್ಟರ ಆರೋಗ್ಯ, ಶಿಕ್ಷಣಕ್ಕಾಗಿ ಮೀಸಲಿಟ್ಟ ₹60 ಸಾವಿರ ಕೋಟಿಯನ್ನು ಬೇರೆ ಉದ್ದೇಶಕ್ಕೆ ಸರ್ಕಾರ ಬಳಸಿದೆ. ಕಡಲ ಮೀನುಗಾರಿಕೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ₹22 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ತನ್ನದೇ ಎಂದು ಬಿಂಬಿಸಿದೆ. ಕಾರ್ಯಕರ್ತರು ಜನತೆಗೆ ಸತ್ಯ ತಿಳಿಸಬೇಕು’ ಎಂದು ಹೇಳಿದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, 2014ರ ಬಳಿಕ ಭಾರತ ಬದಲಾಗಿದೆ. ಜನರ ಸಮಸ್ಯೆಗಳಿಗೆ ಉತ್ತರವಾಗಿ ಬಿಜೆಪಿ ದೇಶದಲ್ಲಿದೆ. ಗೆಲ್ಲಲು ಸಾಧ್ಯವೇ ಇಲ್ಲ ಎಂಬಂತಿದ್ದ ಪಶ್ಚಿಮ ಬಂಗಾಳದಲ್ಲೂ ಈಗ ಬಿಜೆಪಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ 2028ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಬೇಕು’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



