ಡಿ.ಕೆ ಶಿವಕುಮಾರ್ ಗೆ ಶುಭ ಕೋರಿದ ಸೋನಿಯಾ ಗಾಂಧಿ! ಕೊಟ್ಟ ಸಲಹೆ ಏನು?
ಸೋನಿಯಾ ಗಾಂಧಿ ಅವರು ಬುಧವಾರ ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ ಎಂಬ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ.

ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಶುಭಾಶಯ ಕೋರಿದ್ದಾರೆ.
ಸೋನಿಯಾ ಗಾಂಧಿ ಅವರು ಬುಧವಾರ ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ ಎಂಬ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಶುಭಾಶಯ ಹೇಳಿದ್ದಾರೆ.
ಸಂಜೆ ರಾಜಭವನದ ಗಾಜಿನ ಮನೆಯಲ್ಲಿ ಸಂಜೆ 4-30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಜೊತೆ 13 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪರಮೇಶ್ವರ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




