ರಾಜ್ಯ

ಆದಷ್ಟು ಬೇಗ GBA ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ

ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಆದಷ್ಟು ಬೇಗ GBA ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ
ಜಿಬಿಎ
Published On :

ಬೆಂಗಳೂರು: ಬಹುಕಾಲದಿಂದ ಬಾಕಿ ಉಳಿದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಂಸತ್ ಸದಸ್ಯ ಡಾ. ಸಿ. ನಾರಾಯಣಸ್ವಾಮಿ ಹೊಸದಾಗಿ ರಚನೆಯಾದ ರಾಜ್ಯ ಸಚಿವ ಸಂಪುಟವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ವಿಳಂಬದಿಂದಾಗಿ ಬೆಂಗಳೂರಿಗೆ ಸುಮಾರು 10,000 ಕೋಟಿ ರೂ. ಕೇಂದ್ರ ಹಣಕಾಸು ನೆರವು ಸಿಗುತ್ತಿಲ್ಲ ಎಂದು ಹೇಳಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆಯ (ಐಐಪಿಎ) ಕರ್ನಾಟಕ ಪ್ರಾದೇಶಿಕ ಶಾಖೆ ಆಯೋಜಿಸಿದ್ದ "ಸ್ಥಳೀಯ ಸಂಸ್ಥೆಗಳಿಗೆ ನಿಧಿಯ ವಿಕೇಂದ್ರೀಕರಣ - ಐದನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ವರದಿ" ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.

ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.1993 ರಲ್ಲಿ ಜಾರಿಗೆ ತರಲಾದ 73 ನೇ ಮತ್ತು 74 ನೇ ಸಾಂವಿಧಾನಿಕ ತಿದ್ದುಪಡಿಗಳು ಸ್ಥಳೀಯ ಸಂಸ್ಥೆಗಳಿಗೆ ಸಬಲೀಕರಣ ಮತ್ತು ಅಧಿಕಾರದ ವಿಕೇಂದ್ರೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದವು ಎಂದು ಡಾ. ನಾರಾಯಣಸ್ವಾಮಿ ಹೇಳಿದರು.

15ನೇ ಹಣಕಾಸು ಆಯೋಗವು ನಿಗದಿಪಡಿಸಿದ ಷರತ್ತುಗಳನ್ನು ಪಾಲಿಸಲು ಕರ್ನಾಟಕ ವಿಫಲವಾದ ಕಾರಣ ಅನುದಾನಗಳನ್ನು ತಡೆಹಿಡಿಯಲಾಗಿದೆ, ಇದರ ಪರಿಣಾಮವಾಗಿ ಆರ್ಥಿಕ ಹಿನ್ನಡೆ ಉಂಟಾಗಿದೆ ಮತ್ತು ಸ್ಥಳೀಯ ಸಂಸ್ಥೆಗಳು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.