ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ 20 ದಿನಗಳ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಕೃತ ಆದೇಶ ಹೊರಡಿಸಿದ್ದು, ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ಪ್ರಕರಣ ದಾಖಲಾಗಿ ದಂಡ ಬಾಕಿ ಉಳಿಸಿಕೊಂಡಿರುವವರು ಶೇ. 50 ರಷ್ಟು ದಂಡ ಪಾವತಿ ಮಾಡಿ, ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಇನ್ನು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ಮೇ 2026 ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ ಮೇ, 2026ರ ನಂತರದ ಕೇಸ್ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


