Rajya sabha election: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ನಾಮಪತ್ರ ಸಲ್ಲಿಕೆ
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಮತ್ತು ಹಲವಾರು ಸಚಿವರು ಈ ವೇಳೆ ಇದ್ದರು.
ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸತ್ತಿನ ಮೇಲ್ಮನೆಯಲ್ಲಿ ಅವರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದೆ.
ವಿಧಾನಸಭೆಯಲ್ಲಿ ಈಗಿರುವ ಸದಸ್ಯರ ಬಲದಲ್ಲಿ ಕಾಂಗ್ರೆಸ್ 3 ಹಾಗೂ ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದಾಗಿದೆ.
ನಾಮಪತ್ರ ಸಲ್ಲಿಸಲು ಜೂನ್ 8 ಕೊನೆ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು 10 ಕೊನೆ ದಿನವಾಗಿದೆ. ಮತದಾನ ನಡೆದ ಜೂನ್ 18 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


