ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video
ಇಂದು ವಿಧಾನಸೌಧಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಗಾದಿಗೇರಿದ್ದು ಖಾತೆ ಹಂಚಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.
ಇಂದು ವಿಧಾನಸೌಧಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸಿದ್ದರಾಮಯ್ಯ ಒಂಟಿಯಾಗಿ ಓಡಾಡುತ್ತಿದ್ದರು. ಇನ್ನು ಕುತೂಹಲಕಾರಿ ವಿಷಯವೆಂದರೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾದರೂ ಒಬ್ಬರಿಗೊಬ್ಬರು ಮಾತನಾಡಿಸದೇ ಮುಂದೆ ಹೋಗಿದ್ದಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


