ರಾಜ್ಯ

ಆರು ವರ್ಷಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಆಸ್ತಿ ದುಪ್ಪಟ್ಟು: AICC ಅಧ್ಯಕ್ಷ ಎಷ್ಟು ಕೋಟಿಯ ಒಡೆಯ?

ಜೂನ್‌ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಖರ್ಗೆ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ಚುನಾವಣಾ ಅಧಿಕಾರಿಗೆ ತಮ್ಮ ಒಟ್ಟು ಆಸ್ತಿಯ ವಿವರವನ್ನು ನೀಡಿದ್ದಾರೆ.

ಆರು ವರ್ಷಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಆಸ್ತಿ ದುಪ್ಪಟ್ಟು: AICC ಅಧ್ಯಕ್ಷ ಎಷ್ಟು ಕೋಟಿಯ ಒಡೆಯ?
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಸೇರಿದಂತೆ ಮೂವರು ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ.

ಜೂನ್‌ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಖರ್ಗೆ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ಚುನಾವಣಾ ಅಧಿಕಾರಿಗೆ ತಮ್ಮ ಒಟ್ಟು ಆಸ್ತಿಯ ವಿವರವನ್ನು ನೀಡಿದ್ದಾರೆ. ಹಾಗಿದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಟ್ಟು ಆಸ್ತಿ ಎಷ್ಟಿದೆ? ಸಾಲ ಎಷ್ಟಿದೆ ಎಂಬ ವಿವರ ಇಲ್ಲಿದೆ.

ರಾಜ್ಯಸಭಾ ಚುನಾವಣೆ ಹಿನ್ನಲೆ ನಾಮಪತ್ರ ಸಲ್ಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ನಾಮಪತ್ರದ ಜತೆ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅಫಿಡೆವಿಟ್ ಮೂಲಕ ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ಆಯೋಗಕ್ಕೆ ಆಸ್ತಿ ಮೌಲ್ಯದ ವಿವರ ಸಲ್ಲಿಸಿದ್ದಾರೆ. ಆ ಅಫಿಡವಿಟ್ ಪ್ರಕಾರ ಚರ ಮತ್ತು ಸ್ಥಿರ ಆಸ್ತಿ ಸೇರಿದಂತೆ ಅವರ ಒಟ್ಟು ಆಸ್ತಿ ಸುಮಾರು 38.80 ಕೋಟಿ ರೂಪಾಯಿ ಆಗಿದೆ.

ಮಲ್ಲಿಕಾರ್ಜುನ ಖರ್ಗೆ ಒಟ್ಟು ಚರಾಸ್ತಿ 6.59 ಕೋಟಿ ರೂ. ಹೊಂದಿದ್ದಾರೆ. ಪತ್ನಿ ಹೆಸರಲ್ಲಿ ಒಟ್ಟು 4.41 ಕೋಟಿ ರೂ. ಆಸ್ತಿ ಇದೆ. ಈ ಪೈಕಿ ಖರ್ಗೆ ಹೆಸರಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 5.25 ಕೋಟಿ ರೂ. ಠೇವಣಿಗಳನ್ನು ಹೊಂದಿದ್ದಾರೆ. ಪತ್ನಿ ಹೆಸರಲ್ಲಿ ಒಟ್ಟು 2.84 ಕೋಟಿ ರೂ. ಠೇವಣಿಗಳನ್ನು ಹೊಂದಿದ್ದಾರೆ. ಖರ್ಗೆ ಒಟ್ಟು 54.15 ಲಕ್ಷ ರೂ. ಮೊತ್ತದ ಚಿನ್ನಾಭರಣ ಹೊಂದಿದ್ದಾರೆ. ಇನ್ನು ಅವರ ಪತ್ನಿ ರಾಧಾ ಬಾಯ್ ಖರ್ಗೆ ಒಟ್ಟು 1.50 ಕೋಟಿ ಚಿನ್ನಾಭರಣ ಹೊಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಒಟ್ಟು ಸ್ಥಿರಾಸ್ತಿ 8.30 ಕೋಟಿ ರೂ. ಹೊಂದಿದ್ದಾರೆ. ಪತ್ನಿ ಹೆಸರಲ್ಲಿ ಒಟ್ಟು 9.85 ಕೋಟಿ ರೂ. ಸ್ಥಿರಾಸ್ತಿ ಇದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹೆಸರಲ್ಲಿ ಸುಮಾರು 9.22 ಕೋಟಿ ರೂ. ಸ್ಥಿರಾಸ್ತಿ ಇದೆ. ಈ ಪೈಕಿ ಖರ್ಗೆ ಪತ್ನಿ ಹೆಸರಲ್ಲಿ 4 ಕೋಟಿ ರೂ.

ಮೌಲ್ಯದ ವಾಣಿಜ್ಯ ಕಟ್ಟಡಗಳು ಇವೆ. ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಸದಾಶಿವನಗರ, ಕಲಬುರ್ಗಿಯಲ್ಲಿರುವ ಒಟ್ಟು ಮೂರು ಮನೆಗಳ ಆಸ್ತಿ ಮೌಲ್ಯ ಸುಮಾರು 7.82 ಕೋಟಿ ರೂ. ಇದೆ. ಅದೇ ರೀತಿ ಪತ್ನಿ ಹೆಸರಲ್ಲಿ ಸದಾಶಿವನಗ, ಕಲಬುರ್ಗಿಯಲ್ಲಿರುವ ಒಟ್ಟು ಮನೆಗಳ ಮೌಲ್ಯ ಸುಮಾರು 3.32 ಕೋಟಿ ರೂ. ಆಗಿದೆ. 2020ರ ಜೂನ್‌ನಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಅವರ ಒಟ್ಟು ಆಸ್ತಿಯ ಮೌಲ್ಯ 20.12 ಕೋಟಿಗಳಷ್ಟಿತ್ತು.

ಇನ್ನು, ಮಲ್ಲಿಕಾರ್ಜುನ ಖರ್ಗೆ ಸುಮಾರು 10 ಲಕ್ಷ ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 17.50 ಲಕ್ಷ ಸಾಲಗಳಿವೆ. ಮಲ್ಲಿಕಾರ್ಜುನ ಖರ್ಗೆ ಪತ್ನಿ, ಅವರ ಕುಟುಂಬದ್ದು ಸೇರಿ ಒಟ್ಟು ಚರಾಸ್ಥಿ ಹಾಗೂ ಸ್ಥಿರಾಸ್ತಿ ಮೌಲ್ಯ ಸುಮಾರು 38.80 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.