ರಾಜ್ಯ

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ; ಟ್ರಸ್ಟ್ ವಿರುದ್ಧ ಗಂಭೀರ ಆರೋಪ!

ಹರಿಹರದ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ.

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ; ಟ್ರಸ್ಟ್ ವಿರುದ್ಧ ಗಂಭೀರ ಆರೋಪ!
ಪಂಚಮಸಾಲಿ ಮಠ
Published On :

ದಾವಣಗೆರೆ: ಹರಿಹರದ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟ್ರಸ್ಟ್‌ನವರು ಸದ್ಯ ಕೇವಲ 27 ಕೋಟಿ ರೂಪಾಯಿಗಳ ನಗದು ಲೆಕ್ಕವನ್ನು ಮಾತ್ರ ಸಮಾಜದ ಮುಂದೆ ಇಟ್ಟಿದ್ದಾರೆ. ಆದರೆ ಮಠಕ್ಕೆಂದು ಭಕ್ತರು ನೀಡಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣದ ಬಗ್ಗೆ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದರು.

ಹರಿಹರದ ಪಂಚಮಸಾಲಿ ಮಠ 2008ರ ಫೆಬ್ರವರಿ 18ರಂದು ಸ್ಥಾಪನೆಯಾಗಿತ್ತು. ಆ ದಿನ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಮಠದ ಶ್ರೀಗಳಿಗೆ ಚಿನ್ನದ ಉಂಗುರ, ಚಿನ್ನದ ಕಡಗ ಹಾಗೂ ಭವ್ಯವಾದ ಚಿನ್ನದ ಕಿರೀಟ ಸೇರಿದಂತೆ ಸುಮಾರು ಒಂದೂವರೆ ಕೆಜಿ ಚಿನ್ನಾಭರಣಗಳನ್ನು ದಾನವಾಗಿ ನೀಡಿದ್ದರು. ಸ್ವಾಮೀಜಿಯವರಿಗೆ ನೀಡಲಾಗಿದ್ದ ಈ ಎಲ್ಲ ಆಭರಣಗಳನ್ನು ಸದ್ಯ ಮಠದ ಟ್ರಸ್ಟ್‌ನವರೇ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೂಡಲೇ ಮಠದ ಹೆಸರಿನಲ್ಲಿರುವ ಒಟ್ಟು ಚಿನ್ನಾಭರಣ, ಬೆಳ್ಳಿ ವಸ್ತುಗಳು ಎಷ್ಟು? ಮಠಕ್ಕೆ ಸೇರಿದ ಜಮೀನು ಎಲ್ಲೆಲ್ಲಿದೆ? ಈ ಎಲ್ಲ ಅಧಿಕೃತ ದಾಖಲೆಗಳನ್ನು ಟ್ರಸ್ಟ್‌ನವರು ತಕ್ಷಣವೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.