Karnataka CET Result 2026: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ; 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!
ಬೆಂಗಳೂರಿನ ಆರ್ ವಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಮೊದಲ ಸ್ಥಾನ ಪಡೆದಿದ್ದಾರೆ. ಸೃಜನ್ ಗೆ 2ನೇ rank ಹಾಗೂ ನಿನಾದ್ ವಸಿಷ್ಠ ಮೂರನೇ rank ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (kea) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ 2,92,782 ಮಂದಿ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.
ಬೆಂಗಳೂರಿನ ಆರ್ ವಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಮೊದಲ ಸ್ಥಾನ ಪಡೆದಿದ್ದಾರೆ. ಸೃಜನ್ ಗೆ 2ನೇ rank ಹಾಗೂ ನಿನಾದ್ ವಸಿಷ್ಠ ಮೂರನೇ rank ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಎಂಜಿನಿಯರಿಂಗ್ ಗೆ 2,82,603 ಮಂದಿ, ಬಿಎಸ್ಸಿ (ಕೃಷಿ, ರೇಷ್ಮೆ, ಆಹಾರ ವಿಜ್ಞಾನ) ಗೆ 2,09,220 ಮಂದಿ, ಬಿ.ವಿ.ಎಸ್ಸಿ (ಪಶು ವೈದ್ಯಕೀಯ) 2,12,909 ಮಂದಿ, ಬಿ. ಫಾರ್ಮ್ ಗೆ 2,86,609 ಮಂದಿ, BSC ನರ್ಸಿಂಗ್ ಗೆ 2,18,785 ಮಂದಿ, BNYS ಗೆ 2,12, 730 ಮಂದಿ, ಕೃಷಿ ಪ್ರಾಯೋಗಿಕ 21, 775 ಮಂದಿ ಮತ್ತು BVSC ಪ್ರಾಯೋಗಿಕ ವಿಭಾಗದಲ್ಲಿ 21, 838 ಮಂದಿ ಅರ್ಹತೆ ಪಡೆದಿದ್ದಾರೆ.
ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. 23 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ 24 ರಂದು ಗಣಿತ, ಜೀವ ವಿಜ್ಞಾನ ಪರೀಕ್ಷೆಗಳು ನಡೆದಿದ್ದವು.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22 ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು,ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ಕಿಸಿ ಫಲಿತಾಂಶ ಪಡೆಯಬಹುದಾಗಿದೆ.
keaonline.karnataka.gov.in/ugcet-2026-results/
cetonline.karnataka.gov.in
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


