ರಾಜ್ಯ

ಹೊಸಕೋಟೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ..!

ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ನಡೆದಿದೆ. ಊಟ ಮುಗಿಸಿ ಮನೆಯಿಂದ ಹೊರಬಂದಿದ್ದ ಖಲೀಮುಲ್ಲಾ ಖಾನ್ ಮೇಲೆ ಮನೆ ಸಮೀಪವೇ ಹೊಂಚುಹಾಕಿ ಕಾದಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಹೊಸಕೋಟೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ..!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಬೆನ್ನಟ್ಟಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮೃತನನ್ನು ಖಲೀಮುಲ್ಲಾ ಖಾನ್ (36) ಎಂದು ಗುರುತಿಸಲಾಗಿದೆ. ಆತ ಸೂಲಿಬೆಲೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ನಡೆದಿದೆ. ಊಟ ಮುಗಿಸಿ ಮನೆಯಿಂದ ಹೊರಬಂದಿದ್ದ ಖಲೀಮುಲ್ಲಾ ಖಾನ್ ಮೇಲೆ ಮನೆ ಸಮೀಪವೇ ಹೊಂಚುಹಾಕಿ ಕಾದಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು ಖಾನ್‌ನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದಾಗ ಆತ ಪ್ರಾಣ ಉಳಿಸಿಕೊಳ್ಳಲು ಓಡಲು ಯತ್ನಿಸಿದ್ದಾನೆ. ಆದರೆ, ದುಷ್ಕರ್ಮಿಗಳು ಬೆನ್ನಟ್ಟಿಕೊಂಡು ಹೋಗಿ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಖಾನ್ ದೇಹದ ಮೇಲೆ 20ಕ್ಕೂ ಹೆಚ್ಚು ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ಹತ್ಯೆ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸೂಲಿಬೆಲೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೂವರಿಂದ ಐವರವರೆಗೆ ಆರೋಪಿಗಳು ದಾಳಿಯಲ್ಲಿ ಭಾಗಿಯಾಗಿರುವ ಸಾಧ್ಯತೆ ಕಂಡುಬಂದಿದೆ.

ಆರೋಪಿಗಳ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಹತ್ಯೆಗೆ ನಿಖರ ಕಾರಣ ಏನು ಎಂಬುದು ಆರೋಪಿಗಳ ಬಂಧನದ ಬಳಿಕವೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.