ಡಿಕೆಶಿ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ; ಖಾತೆ ಬಗ್ಗೆ ಕ್ಯಾತೆ ತೆಗೆದಿದ್ದ ರಾಮಲಿಂಗಾರೆಡ್ಡಿಗೆ ಬಂಪರ್!
ಮೊದಲ ಹಂತದಲ್ಲಿ ಡಿಕೆಶಿ ಸಂಪುಟ ಸೇರಿದ 13 ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿ ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಖಾತೆ ಹಂಚಿಕೆ ನಂತರ ಇದೀಗ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.
ಮೊದಲ ಹಂತದಲ್ಲಿ ಡಿಕೆಶಿ ಸಂಪುಟ ಸೇರಿದ 13 ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿ ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಖಾತೆ ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಳಿಕ ವಾಪಸ್ ಪಡೆದ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಬಂಪರ್ ಗಿಫ್ಟ್ ನೀಡಿದ್ದು, ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ.
ಹೌದು, ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ 335, 336, 337, 337A ಕೊಠಡಿಗಳ ಹಂಚಿಕೆ ಮಾಡಲಾಗಿದೆ. ಈ ಮೂಲಕ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ.
ಈ ಹಿಂದೆ ಡಿಸಿಎಂ ಆಗಿದ್ದಾಗ ಡಿ.ಕೆ.ಶಿವಕುಮಾರ್ ಬಳಸುತ್ತಿದ್ದ ಕಚೇರಿಯನ್ನು ಸಿಎಂ ಕಚೇರಿಯಂತೆ ನವೀಕರಣ ಮಾಡಿಸಿದ್ದರು. ಈಗ ಅದೇ ಕೊಠಡಿಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹಂಚಿಕೆ ಮಾಡಲಾಗಿದೆ.
ಯಾರಿಗೆ ಯಾವ ಕೊಠಡಿ?
ಪರಮೇಶ್ವರ್ ಉಪ ಮುಖ್ಯಮಂತ್ರಿ (ಕಂದಾಯ ಮತ್ತು ಯುವಸಬಲೀಕರಣ) – ವಿಧಾನಸೌಧ 327/327a
ಕೆ.ಎಚ್ ಮುನಿಯಪ್ಪ, (ಆಹಾರ ಸಚಿವ)- ವಿಧಾನಸೌಧ – 340a/341/341a
ಕೆಜೆ ಜಾರ್ಜ್ (ಇಂಧನ ಮತ್ತು ಪ್ರವಾಸೋದ್ಯುಮ) – ವಿಧಾನಸೌಧ, 317/317a
ಎಂಬಿ ಪಾಟೀಲ್, (ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ) – ವಿಧಾನಸೌಧ – 344/344a
ರಾಮಲಿಂಗಾರೆಡ್ಡಿ, (ಜಲಸಂಪನ್ಮೂಲ ಸಚಿವ) – ವಿಧಾನಸೌಧ, 335/336/337/337a
ಸತೀಶ್ ಜಾರಕಿಹೊಳಿ, (ಲೋಕೋಪಯೋಗಿ ಸಚಿವ) – ವಿಕಾಸಸೌಧ, 444/445
ಕೃಷ್ಣ ಬೈರೇಗೌಡ, ಸಚಿವ -(ಬೆಂಗಳೂರು ನಗರಾಭಿವೃದ್ಧಿ ಸಚಿವ) ವಿಕಾಸಸೌಧ, 244/245
ಪ್ರಿಯಾಂಕ್ ಖರ್ಗೆ, (ಗೃಹ ಇಲಾಖೆ ಮತ್ತು ಐಟಿಬಿಟಿ) – ವಿಕಾಸ ಸೌಧ, 242, 243
ಯುಟಿ ಖಾದರ್, (ಆರೋಗ್ಯ ಸಚಿವ) – ವಿಧಾನಸೌಧ, 315/315a
ಈಶ್ವರ್ ಖಂಡ್ರೆ, (ಗ್ರಾಮೀಣಾಭಿವೃದ್ಧಿ ಸಚಿವ) – ವಿಕಾಸಸೌಧ, 36/37
ಯತೀಂದ್ರ ಸಿದ್ದರಾಮಯ್ಯ, (ನಗರಾಭಿವೃದ್ಧಿ ಸಚಿವ) – ವಿಧಾನಸೌಧ, 314/314a
ಶರಣಪ್ರಕಾಶ್ ಪಾಟೀಲ್, (ವೈದ್ಯಕೀಯ ಶಿಕ್ಷಣ ಸಚಿವ) – ವಿಕಾಸಸೌಧ. 344/345
ಬೈರತಿ ಸುರೇಶ್, (ಸಾರಿಗೆ ಸಚಿವ) – ವಿಧಾನಸೌಧ, 316/316a
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



