ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ
ಪಬ್ಗಳು, ಬ್ರೂವರೀಸ್, ಬಾರ್, ಕ್ಲಬ್ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್.

ಬೆಂಗಳೂರು: ರಾಜ್ಯ ಸರ್ಕಾರ ಅಪ್ರಾಪ್ತರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಈ ಸಂಬಂಧ ಪಬ್, ಬಾರ್ಗಳು ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ತೀವ್ರ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಿದೆ.
ಪಬ್ಗಳು, ಬ್ರೂವರೀಸ್, ಬಾರ್, ಕ್ಲಬ್ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್ ನೀಡುವಂತೆ ಗೃಹ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ನಗರ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮದ್ಯ ಸರಬರಾಜು ಮಾಡುವ ಎಲ್ಲಾ ಸಂಸ್ಥೆಗಳು ಪ್ರವೇಶ ದ್ವಾರದಲ್ಲಿ ಮತ್ತು ಮದ್ಯವನ್ನು ನೀಡುವ ಮೊದಲು ಕಟ್ಟುನಿಟ್ಟಾಗಿ ಅವರ ವಯಸ್ಸನ್ನು ಪರಿಶೀಲಿಸುವ ನಿಯಮಗಳನ್ನು ಜಾರಿಗೆ ತರಬೇಕು ಎಂದು ಖರ್ಗೆ ಆದೇಶಿಸಿದ್ದಾರೆ. ಹೀಗಾಗಿ ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಬಾರ್, ಪಬ್ಗಳಿಗೆ ಪ್ರವೇಶವಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ.
ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಂಶೋಧಕರು ನಡೆಸಿದ ಅಧ್ಯಯನದಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಇತ್ತೀಚಿನ ಅಧ್ಯಯನವು ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಸೇವನೆಯಿಂದಾಗಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸಿದ ಶೇ 33 ರಷ್ಟು ಜನ ಮದ್ಯಪಾನಕ್ಕೆ ದಾಸರಾಗಿದ್ದಾರೆ. ಸುಮಾರು ಶೇ 18 ರಷ್ಟು ಜನ ತಂಬಾಕು ವ್ಯಸನಕ್ಕೆ ಒಳಗಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ.
ಇದು ಕೇವಲ ಪರವಾನಗಿ ಸಮಸ್ಯೆಯಲ್ಲ. ಇದು ಯುವ ಸುರಕ್ಷತೆ ಮತ್ತು ಸಾರ್ವಜನಿಕ-ಆರೋಗ್ಯದ ವಿಚಾರ. ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳು ಗ್ರಾಹಕರ ಪ್ರವೇಶ ಮತ್ತು ಮದ್ಯ ಪೂರೈಕೆಯ ಮೊದಲು ಕಟ್ಟುನಿಟ್ಟಾದ ವಯಸ್ಸಿನ ಪರಿಶೀಲನಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ನಿರ್ದೇಶನಗಳು:
- ಮಾನ್ಯವಾದ ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ
- ಸರ್ಕಾರ ನೀಡಿದ ವಯಸ್ಸಿನ ಪುರಾವೆ ಕಡ್ಡಾಯ
- ಅಪ್ರಾಪ್ತ ವಯಸ್ಕರಿಗೆ ಸೇವೆ ಸಲ್ಲಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ
- ಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿ ಹೊಂದಿರುವವರೇ ಹೊಣೆಗಾರರು
- ಪ್ರವೇಶ ದ್ವಾರದಲ್ಲಿರುವ ಸಿಸಿಟಿವಿ ಕಾರ್ಯನಿರ್ವಹಿಸಬೇಕು ಮತ್ತು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು
- ಸಂಸ್ಥೆಗಳು, ಆರ್ಡಬ್ಲ್ಯೂಎಗಳು ಮತ್ತು ನಾಗರಿಕ ಗುಂಪುಗಳೊಂದಿಗೆ ಪೊಲೀಸ್ ಸಮನ್ವಯ
- ವಾಣಿಜ್ಯ ಲಾಭಕ್ಕಾಗಿ ನಮ್ಮ ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ನಷ್ಟವನ್ನು ಭರಿಸಲು ಸಾಧ್ಯವಿಲ್ಲ.
- ಕರ್ನಾಟಕವು ಅದಕ್ಕೆ ಅವಕಾಶ ಕೊಡುವ ಸಂಸ್ಥೆಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅನುಸರಿಸುತ್ತದೆ. "ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ". ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಅಪರಾಧ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



