ರಾಜ್ಯ

ಖಾಸಗಿ ಬಸ್ ಟಿಕೆಟ್‌ ದರ ಇಂದಿನಿಂದ ಶೇಕಡಾ 5 ರಿಂದ 8ರಷ್ಟು ಹೆಚ್ಚಳ!

ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಖಾಸಗಿ ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಬಸ್ ಟಿಕೆಟ್‌ ದರ ಇಂದಿನಿಂದ ಶೇಕಡಾ 5 ರಿಂದ 8ರಷ್ಟು ಹೆಚ್ಚಳ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಟಿಕೆಟ್‌ ದರ ಏರಿಕೆಯ ಬಿಸಿ ತಟ್ಟಲಿದೆ. ಖಾಸಗಿವಾಹನ ಬಸ್‌ಗಳ ಪ್ರಯಾಣ ದರವನ್ನ ಶೇ. 5 ರಿಂದ 8 ರಷ್ಟು ಹೆಚ್ಚಳ ಮಾಡಲಾಗಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.

ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಖಾಸಗಿ ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.

ಸ್ಟೇಜ್ ಕ್ಯಾರಿಯೇಜ್ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಫೆಡರೇಷನ್ ಆಫ್ ಸ್ಟೇಜ್ ಕ್ಯಾರಿಯೇಜ್ ಬಸ್ ಆಪರೇಟರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರು ಬೆಲೆ ಏರಿಕೆ ಬಗ್ಗೆ ಘೋಷಣೆ ಮಾಡಿದ್ದಾರೆ. ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದ್ದು, ಟಿಕೆಟ್ ದರ ಶೇಕಡಾ 5 ರಿಂದ ಶೇಕಡಾ 8ರವರೆಗೆ ಹೆಚ್ಚಿಸಲಾಗಿದೆ.

ಒಕ್ಕೂಟದ ರಾಜ್ಯ ಅಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಈ ಬಗ್ಗೆ ಮಾತಾಡಿದ್ದು, ಕೇಂದ್ರ ಸರಕಾರ ನಾಲ್ಕು ಬಾರಿ 8.17 ಡೀಸೆಲ್ ದರ ಜಾಸ್ತಿ ಮಾಡಿದೆ. ರಾಜ್ಯ ಸರ್ಕಾರ ವರ್ಷದ ಹಿಂದೆ ರೂ.3 ಏರಿಕೆ ಮಾಡಿತ್ತು. ಹಾಗೇ ವಾಹನಗಳ ಬಿಡಿ ಭಾಗಗಳ ದರ ಹೆಚ್ಚಾಗಿದೆ. ಟಯರ್ ರಿಸೋಲಿಂಗ್ ದರ ಹೆಚ್ಚಾಗಿದ್ದು, ಟೋಲ್ ದರ, ನೌಕರರ ವೇತನ , ತೆರಿಗೆ , ಇನ್ಸೂರೆನ್ಸ್ ಎಲ್ಲವೂ ಹೆಚ್ಚಾಗಿದೆ ಹೀಗಾಗಿ ಬಸ್ ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.