ರಾಜ್ಯ

ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡಿದ್ದ; ಶ್ರೀರಾಮ ದಶರಥನ ಮಗನಲ್ಲ, ಬೌದ್ಧ ಶ್ರೇಷ್ಠ ಧರ್ಮ: ಭಗವಾನ್ ವಿವಾದಾತ್ಮಕ ಹೇಳಿಕೆ

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡಿದ್ದ; ಶ್ರೀರಾಮ ದಶರಥನ ಮಗನಲ್ಲ, ಬೌದ್ಧ ಶ್ರೇಷ್ಠ ಧರ್ಮ: ಭಗವಾನ್ ವಿವಾದಾತ್ಮಕ ಹೇಳಿಕೆ
ಕೆಎಸ್ ಭಗವಾನ್
Published On :

ದಾವಣಗೆರೆ: ಪ್ರೊ. ಭಗವಾನ್ ಮತ್ತೊಮ್ಮೆ ಭಗವಂತ ಶ್ರೀರಾಮನ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್​​, ರಾಮಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಈ ಬಗ್ಗೆ ಬರೆದಿದ್ದೇನೆ. ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರೋದಾಗಿ ಹೇಳಿದ್ದಾರೆ. ಶೂದ್ರನಾದ ಶಂಭೂಕನನ್ನು ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಆದರ್ಶ ವ್ಯಕ್ತಿಯಾಗಬೇಕಾ? ಮೊದಲು ನಿಮ್ಮ ಮೇಲೆ‌ ನೀವು ನಂಬಿಕೆ ಬೆಳಸಿಕೊಳ್ಳಿ.

ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಅಂಬೇಡ್ಕರ್​​ ಈ ಗುಲಾಮಗಿರಿಯಿಂದ ಜನತೆಗೆ ಮುಕ್ತಿ ಕೊಡಿಸಿದ್ದಾರೆ ಎಂದು ಭಗವಾನ್ ಹೇಳಿದರು. ಸ್ವಾಮಿ ವಿವೇಕಾನಂದರು ತಾವು ಬೌದ್ಧ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ. ಬೌದ್ಧ ಧರ್ಮ ಅತ್ಯಂತ ಮಾನವೀಯವಾದ ಧರ್ಮ, ವೈಜ್ಞಾನಿಕ ಧರ್ಮವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.