ರಾಜ್ಯ

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ
ಸುನೀಲ್‌ ಕನುಗೋಳು
Published On :

ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸುನೀಲ್‌ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.‌ ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್‌ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು

ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.

ಪಕ್ಷ ಗೆಲ್ಲುವಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದರು. ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.