ರಾಜ್ಯ

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಬಂಧನ; 1.37 ಕೋಟಿ ರೂ ಮೌಲ್ಯದ ಬಂಗಾರ ವಶಕ್ಕೆ!

4 ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್‌ ಅನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಬಂಧನ; 1.37 ಕೋಟಿ ರೂ ಮೌಲ್ಯದ ಬಂಗಾರ ವಶಕ್ಕೆ!
ಚಿನ್ನ ಕಳ್ಳಸಾಗಣೆ
Published On :

ಬೆಂಗಳೂರು: ಬೆಂಗಳೂರಿನ ಕಸ್ಟಮ್ಸ್​​ ಅಧಿಕಾರಿಗಳು ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಬಂಧಿಸಿದ್ದು, ಆತನಿಂದ 1.37 ಕೋಟಿ ರೂ. ಮೌಲ್ಯದ ಬಂಗಾರ ವಶಕ್ಕೆ ಪಡೆದಿದ್ದಾರೆ.

4 ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್‌ ಅನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈನಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಆರೋಪಿಯ ಕಳ್ಳಾಟವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಆರೋಪಿ, ನಾಲ್ಕು ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಸಾಗಟಕ್ಕೆ‌ ಯತ್ನಿಸಿದ್ದ. ಆದರೆ ಅನುಮಾನಾಸ್ಪದ ವರ್ತನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಹಿರಂಗಗೊಂಡಿದೆ.

ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ.‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.