ಚಿಕ್ಕಮಗಳೂರು: ಮಹಿಳೆ ನಿಗೂಢ ಸಾವು; ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ
ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಸುಮಾ ಅವರ ಪತಿ ರಾಜೇಶ್ ಉದ್ಯಮಿಯಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಸುಮಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದೆ.
ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಡೆತ್ ನೋಟ್ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



