ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ: ಭಗವಾನ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು
ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಬೆಂಗಳೂರು: ಮತ್ತೊಮ್ಮೆ ಶ್ರೀರಾಮನ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ(ಹಿಂಜಸ) ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ದೂರು ನೀಡಿದೆ.
ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಹಿಂದೂ ಧರ್ಮದ ಆರಾಧ್ಯ ದೈವವಾಗಿರುವ ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ದೂರು ನೀಡಿದೆ.
ಜೂ.9 ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ಪರಂಪರೆಗಳ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡಿದೆ ಎಂದು ಸಮಿತಿ ದೂರಿನಲ್ಲಿ ತಿಳಿಸಿದೆ.
ದೂರಿನೊಂದಿಗೆ ಭಗವಾನ್ ಭಾಷಣದ ವಿಡಿಯೋ, ಧ್ವನಿಮುದ್ರಣ ಹಾಗೂ ಇತರೆ ಸಾಕ್ಷ್ಯಗಳನ್ನು ಸಲ್ಲಿಸಿದ್ದು, ಪರಿಶೀಲಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



