ಕೊಪ್ಪಳ: ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಕೊಲೆ ಮಾಡಿ, ಸುಟ್ಟು ಹಾಕಿದ ಪ್ರಿಯಕರ!
ಆರೋಪಿ ಪ್ರಿಯಕರ, ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಮೃತದೇಹಕ್ಕೆ ಕಂಬಳಿ ಸುತ್ತಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಜೂನ್ 8 ರಂದು ಸಂಜೆ 7:00 ರಿಂದ ರಾತ್ರಿ 10:15 ರ ನಡುವೆ ನಿರ್ಮಾಣ ಹಂತದ ಕಟ್ಟದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪ್ರಿಯಕರ, ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಮೃತದೇಹಕ್ಕೆ ಕಂಬಳಿ ಸುತ್ತಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸಂಗನೇಗೌಡ ಮಾಲಿಪಾಟೀಲ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 91/2026, ಸೆಕ್ಷನ್ 103(1), 238 BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ವರಿಷ್ಠಾಧಿಕಾರಿಯ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು. ತನಿಖೆಯ ಮೂಲಕ, ಮೃತ ಮಹಿಳೆಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕಾರಟಗಿ ನಿವಾಸಿ ದಿಮ್ಮುಲಪ್ಪ ನಾಯಕ್ ಅವರ ಪತ್ನಿ(43 ವರ್ಷ) ಎಂದು ಗುರುತಿಸಲಾಗಿದೆ.
ತನಿಖೆಯ ಪ್ರಕಾರ ಮೃತ ಮಹಿಳೆ ಕುಷ್ಟಗಿ ತಾಲೂಕಿನ 30 ವರ್ಷದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಘಟನೆ ನಡೆದ ರಾತ್ರಿ ಆ ವ್ಯಕ್ತಿ ಆಕೆಯನ್ನು ಕನಕಗಿರಿಯ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆತಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ. ಆಕೆಯ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ, ಕೊಲೆ ಮಾಡಿ, ದೇಹವನ್ನು ಕಂಬಳಿಯಿಂದ ಸುತ್ತಿ ಸುಟ್ಟು ಹಾಕಿದ್ದಾನೆ.
ಅಪರಾಧಕ್ಕೆ ಬಳಸಲಾದ ಕಂಬಳಿ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬೇರೆ ಸಮುದಾಯಕ್ಕೆ ಸೇರಿದವನಾಗಿರುವುದರಿಂದ, ಆತನ ವಿರುದ್ಧ SC/ST(PoA) ಕಾಯ್ದೆ, 1989 ರ ಸೆಕ್ಷನ್ 3(2)(5) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



