ರಾಜ್ಯ

ಡಿ.ಕೆ ಶಿವಕುಮಾರ್​​ಗೆ ಗುರುವಿನ ಆಶೀರ್ವಾದವಿದೆ; ಮುಖ್ಯಮಂತ್ರಿಗಳಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ

ಡಿಕೆ ಶಿವಕುಮಾರ್‌ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ.

ಡಿ.ಕೆ ಶಿವಕುಮಾರ್​​ಗೆ ಗುರುವಿನ ಆಶೀರ್ವಾದವಿದೆ; ಮುಖ್ಯಮಂತ್ರಿಗಳಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ
ಡಿ.ಕೆ ಶಿವಕುಮಾರ್
Published On :

ತುಮಕೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಯಾವುದೇ ರೀತಿಯಾದ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸ್ವಾಮೀಜಿ ಈ ಬಗ್ಗೆ ಮಾತನಾಡಿದ್ದಾರೆ. ಸಾಕಷ್ಟು ಪ್ರಯತ್ನದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಇನ್ನು ಮುಂದೆ ಯಾವುದೇ ಕಂಟಕ ಇಲ್ಲ ಎಂದು ತುಮಕೂರಿನ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಅಭಯ ನೀಡಿದ್ದಾರೆ.

ಡಿಕೆ ಶಿವಕುಮಾರ್‌ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​​​ಗೆ ಈಗ ಯಾವುದೇ ರೀತಿಯ ಕಂಟಕಗಳಿಲ್ಲ, ಅವರು ಸಂಪೂರ್ಣವಾಗಿ ಗುರುವಿನ ಆಶೀರ್ವಾದದ ಅಡಿಯಲ್ಲಿ ಇದ್ದಾರೆ.

ಆದ್ದರಿಂದ ಅವರಿಗೆ ಯಾವುದೇ ತೊಂದರೆ ಬಂದರೂ ಅದು ನಿವಾರಣೆ ಆಗುತ್ತೇ ಎಂಬ ಮಾತುಗಳ ಮೂಲಕ ಅಜ್ಜಯ್ಯ ಡಿಕೆಶಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ರಾಜಕೀಯ ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಗುರುವಿನ ಆಶೀರ್ವಾದವಿದ್ದರೆ ಎಲ್ಲ ಅಡೆತಡೆಗಳು ದೂರವಾಗುತ್ತವೆ ಎಂಬ ಸಂದೇಶವನ್ನು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.