ಕಾರವಾರ: ಶಾಲೆ ಆರಂಭವಾಗಿ ಹತ್ತೇ ದಿನದಲ್ಲಿ ಹಾಸ್ಟೆಲ್ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ.

ಕಾರವಾರ: ಇತ್ತೀಚಿಗೆ ಅಪ್ರಾಪ್ತ ಬಾಲಕಿಯರು ಅದರಲ್ಲೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಗರ್ಭಿಣಿಯಾಗುವುದು ಅಥವಾ ಮಗುವಿಗೆ ಜನ್ಮ ನೀಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕಾರವಾರ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಹಾಸ್ಟೆಲ್ ಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿರುವ ಸುದ್ದಿ ಕೇಳಿ ಪೋಷಕರು ಶಾಕ್ ಆಗಿದ್ದಾರೆ.
ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



