ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್; Video
ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಬಳಿಕ ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.
ವಿಜಯ್ ಅವರು ಸಹ ದೇವಸ್ಥಾನದ ಸಂಪ್ರದಾಯದಂತೆ ಶರ್ಟ್ ಬಿಚ್ಚಿ, ಶಲ್ಯ ಧರಿಸಿ ದೇವಸ್ಥಾನ ಪ್ರವೇಶಿಸುವ ಮೂಲಕ ಶಿಷ್ಟಾಚಾರ ಪಾಲನೆ ಮಾಡಿದರು.
ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್ ಸಂಕಲ್ಪ ಪೂಜೆ ಮಾಡಿದರು.
ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್ ದೇವಸ್ಥಾನದಿಂದ ಹೊರಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


