ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!
ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಇಬ್ಬರು ಸಹೋದರಿಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.
ಮೃತ ಯುವತಿಯರು ಸೇರಿದಂತೆ ಕುಟುಬಂದ ಹಲವು ಸದಸ್ಯರು ಜೂನ್ 9ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಮಾವಿನ ಹಣ್ಣು ಸೇವಿಸಿದ್ದಾರೆ. ಬಳಿಕ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತಾಯಿ ಇಂದುಮತಿ ಹಾಗೂ ಐವರು ಪುತ್ರಿಯರು ಮಾವಿನ ಹಣ್ಣು ಸೇವಿಸಿದ ಬಳಿಕ ವಾಂತಿ ಮತ್ತು ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಕುಟುಂಬದ ಎಲ್ಲಾ ಸದಸ್ಯರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮತ್ತು ಸಂಧ್ಯಾರಾಣಿ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರಿ ವಿಜಯಶ್ರೀ(19) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಯಿ ಹಾಗೂ ಮತ್ತೊಬ್ಬ ಸಹೋದರಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ತಿಳಿಯಲಿದೆ.
ಈ ಸಂಬಂಧ ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



