ರಾಜ್ಯ

ಧಾರವಾಡ: love Jihad ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ; ರಾಜಿ ಸಂಧಾನಕ್ಕೆ ಯತ್ನ; ಗರಗ CPI ಅಮಾನತು

ಅಪ್ರಾಪ್ತ ಬಾಲಕಿಯೊಬ್ಬಳು ಲವ್ ಜಿಹಾದ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ನನ್ನು ಅಮಾನತುಗೊಳಿಸಲಾಗಿದೆ.

ಧಾರವಾಡ: love Jihad ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ; ರಾಜಿ ಸಂಧಾನಕ್ಕೆ ಯತ್ನ; ಗರಗ CPI ಅಮಾನತು
ಲವ್ ಜಿಹಾದ್ ಪ್ರಕರಣದ ಆರೋಪಿಗಳು, ಸಿಪಿಐ ಶಿವಯೋಗಿ ಲೋಹಾರ್
Published On :

ಧಾರವಾಡ: ಅಪ್ರಾಪ್ತ ಬಾಲಕಿಯೊಬ್ಬಳು ಲವ್ ಜಿಹಾದ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ನನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪೊಲೀಸ್ ಎಸ್‌ಪಿ ಗುಂಜನ್ ಆರ್ಯ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು. ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳು ನಯೀಮ್ ಬೇಗ್ ಜೋರಮ್ಮನವರ್ (25) ಮತ್ತು ಸೊಹೈಲ್ ಮುಲ್ಲಾ (22) ನನ್ನು ಬಂಧಿಸಿದ್ದಾರೆ.

ಲವ್ ಜಿಹಾದ್ ಪ್ರಕರಣ ಹಿನ್ನಲೆ ಬಜರಂಗ ದಳ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.