ರಾಜ್ಯ

ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್​​ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!

ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್​​ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!
ಮರ್ಸಿಡಿಸ್ ಬೆಂಜ್ ಡಿವೈಡರ್​​ಗೆ ಡಿಕ್ಕಿ
Published On :

ಬೆಂಗಳೂರು: ಬೆಂಗಳೂರು ಗ್ರಾಮಂತರ ಜಿಲ್ಲೆಯ ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಶನಿವಾರ ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ರಸ್ತೆಯ ಡಿವೈಡರ್​​ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ, ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.