ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ yellow ಅಲರ್ಟ್; ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ
ರಾಜ್ಯದ ಇತರ ಭಾಗಗಳಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾನ್ಸೂನ್ ಚುರುಕಾಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ನಗರದಲ್ಲಿ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೋಡ ಕವಿದ ವಾತಾವರಣ ಮತ್ತು ಮಧ್ಯಂತರ ಮಳೆಯೊಂದಿಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ರಾಜ್ಯದ ಇತರ ಭಾಗಗಳಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾನ್ಸೂನ್ ಚುರುಕಾಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
IMD ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬುಧವಾರವರೆಗೆ 30–40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ ಸುಮಾರು 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ತಿಳಿದುಬಂದಿದೆ.
ಇನ್ನು ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸೋಮವಾರ, ಬುಧವಾರ ಮತ್ತು ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಕರ್ನಾಟಕಕ್ಕೂ ಸೋಮವಾರದಿಂದ ಗುರುವಾರದವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿಯೂ ಬುಧವಾರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ 4–5 ದಿನಗಳಲ್ಲಿ ಮುಂಗಾರು ಕರ್ನಾಟಕದ ಉಳಿದ ಭಾಗಗಳಲ್ಲಿಗೂ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ತಾಪಮಾನದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆ ಇಲ್ಲದಿದ್ದರೂ, ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನ ನಿಧಾನವಾಗಿ ಇಳಿಯುವ ಸಾಧ್ಯತೆ ಇದೆ. ತೀವ್ರ ಮಳೆಯ ಸಮಯದಲ್ಲಿ ನೀರು ನಿಲ್ಲುವ ಸಾಧ್ಯತೆ, ಕಡಿಮೆ ಗೋಚರತೆ ಮತ್ತು ಸಂಚಾರ ಅಡಚಣೆಗಳ ಕಾರಣ ಮಳೆ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



