ದಾವಣಗೆರೆಯಲ್ಲಿ 18 ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!
ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ.
ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರು: ಮಟಮಟ ಮಧ್ಯಾಹ್ನವೇ ಪಬ್ನಲ್ಲಿ ಭೀಕರ ಅಗ್ನಿ ದುರಂತ; ಇಬ್ಬರು ಸುಟ್ಟು ಕರಕಲು, 7 ಮಂದಿ ಸ್ಥಿತಿ ಗಂಭೀರ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


