ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ ಕುಮಾರಸ್ವಾಮಿ
ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟರು.
ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.
ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕ ದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಇದಕ್ಕೂ ಮೊದಲು ಅವರು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



