ಸಿಎಂ ಡಿ.ಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್ ಶ್ರೀಧರ್ ನೇಮಕ
ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ಮುಖ್ಯಮಂತ್ರಿಗಳಿಗೆ ನೀತಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಹಕಾರ ನೀಡುವ ಜವಾಬ್ದಾರಿಯನ್ನು ಬಿಎಸ್ ಶ್ರೀಧರ್ ಅವರು ನಿರ್ವಹಿಸಲಿದ್ದಾರೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರವು ಹಿರಿಯ ಅಧಿಕಾರಿಯಾಗಿರುವ ಬಿಎಸ್ ಶ್ರೀಧರ್ (BS Sridhar) ಅವರನ್ನು ಮುಖ್ಯಮಂತ್ರಿ DK ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ (OSD) ಹಾಗೂ ಜಂಟಿ ಕಾರ್ಯದರ್ಶಿ (Joint Secretary) ಆಗಿ ನೇಮಕ ಮಾಡಿದೆ.
ಮೂಲಗಳ ಪ್ರಕಾರ ಮುಖ್ಯಮಂತ್ರಿಗಳ ಕಚೇರಿಯ ಆಡಳಿತಾತ್ಮಕ ಕಾರ್ಯಗಳು, ವಿವಿಧ ಇಲಾಖೆಗಳ ನಡುವಿನ ಸಮನ್ವಯ, ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ಮುಖ್ಯಮಂತ್ರಿಗಳಿಗೆ ನೀತಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಹಕಾರ ನೀಡುವ ಜವಾಬ್ದಾರಿಯನ್ನು ಬಿಎಸ್ ಶ್ರೀಧರ್ ಅವರು ನಿರ್ವಹಿಸಲಿದ್ದಾರೆ.
ಈ ನೇಮಕಾತಿಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯ ಆಡಳಿತಾತ್ಮಕ ತಂಡ ಮತ್ತಷ್ಟು ಬಲಗೊಂಡಿದ್ದು, ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗ ಸಿಗುವ ನಿರೀಕ್ಷೆಯಿದೆ.
2000 ರಿಂದ ಎಸ್‌ಎಂ ಕೃಷ್ಣ ಅವರ ವಿದೇಶಾಂಗ ಸಚಿವ ಹುದ್ದೆಯ ಅಂತ್ಯದವರೆಗೆ ಶ್ರೀಧರ್ ಅವರು ಅವರ ಒಎಸ್‌ಡಿ ಮತ್ತು ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ನಂತರ ಅವರು ಡಿ.ಕೆ. ಶಿವಕುಮಾರ್ ಇಂಧನ ಸಚಿವರಾದಾಗ ಅವರೊಂದಿಗೆ ಸೇರಿಕೊಂಡರು ಮತ್ತು ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



