ರಾಯಚೂರು: ಇಬ್ಬರು ಬಾಲಕಿಯರ ಮೇಲೆ 5 ದಿನ ಲೈಂಗಿಕ ದೌರ್ಜನ್ಯ; ವ್ಯಕ್ತಿ ಬಂಧನ
ಸಂತ್ರಸ್ತರ ಕುಟುಂಬಕ್ಕೆ ಪರಿಚಿತನಾಗಿದ್ದ ಆರೋಪಿ, ಜೂನ್ 10ರಂದು ಬಾಲಕಿಯರ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ರಾಯಚೂರು: ರಾಯಚೂರು ಜಿಲ್ಲೆಯ ತನ್ನ ನಿವಾಸದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯರು 2ನೇ ಮತ್ತು 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಸಂತ್ರಸ್ತರ ಕುಟುಂಬಕ್ಕೆ ಪರಿಚಿತನಾಗಿದ್ದ ಆರೋಪಿ, ಜೂನ್ 10ರಂದು ಬಾಲಕಿಯರ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ತಮ್ಮ ದೂರಿನಲ್ಲಿ ಬಾಲಕಿಯರ ತಂದೆ, ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರೂ ಆರೋಪಿ ತನ್ನ ಕೃತ್ಯವನ್ನು ಮುಂದುವರಿಸಿದ್ದಾನೆ ಎಂದು ತಿಳಿಸಿದ್ದಾರೆ.
5 ದಿನ ಲೈಂಗಿಕ ದೌರ್ಜನ್ಯ
ಆರೋಪಿ ಮುಂದಿನ ಐದು ದಿನಗಳ ಕಾಲವೂ ಇದೇ ರೀತಿಯ ಕೃತ್ಯವನ್ನು ಪುನರಾವರ್ತಿಸಿದ್ದು, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುತ್ತೇನೆ ಎಂದು ಬಾಲಕಿಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



