Bidadi Township: ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ! Video
ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರ ಮಾತನ್ನು ಕೇಳಿ ಯೋಜನೆ ಕೈ ಬಿಡಲು ಆಗಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ನಾಯಕರ ಜಟಾಪಟಿ ಮುಂದುವರೆದಿದ್ದು, ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲು ಆಗಲ್ಲ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೌನ್ ಶಿಫ್ ಮಾಡುವುದು ಅತ್ಯವಶ್ಯಕವಾಗಿದೆ. ಶೇ.80 ರಷ್ಟು ರೈತರು ಜಮೀನು ಕೊಡಲು ಒಪ್ಪಿದ್ದಾರೆ. ಹೆಚ್ಚಿನ ಮಟ್ಟದ ಪರಿಹಾರಕ್ಕೆ ಒಪ್ಪಿದ್ದಾರೆ,ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರ ಮಾತನ್ನು ಕೇಳಿ ಯೋಜನೆ ಕೈ ಬಿಡಲು ಆಗಲ್ಲ. ಬೆಂಗಳೂರು ಜನಸಂದಣಿ ಹೆಚ್ಚಾಗಿದೆ. ಎಷ್ಟೋ ಜನರಿಗೆ ನಿವೇಶನದ ಅಗತ್ಯ ಇದೆ. ಬೆಂಗಳೂರು ಜನಸಂಖ್ಯೆ ಸ್ಪ್ರೆಡ್ ಆಗಬೇಕಿದೆ. ಬೆಂಗಳೂರು ವಿಸ್ತರಣೆಯ ಅವಶ್ಯಕತೆಯಂತೂ ಇದೆ. ರೈತರೊಂದಿಗೆ ಮಾತುಕತೆ ನಡೆಸಿ, ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನೂ ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ನಾವು 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಇಂದು ನಡೆಯುವ ಸಿ.ಎಲ್. ಪಿ ಸಭೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಚುನಾವಣೆ ಸಂಧರ್ಭದಲ್ಲಿ ಇದು ಸಾಮಾನ್ಯ ಪ್ರಕ್ರಿಯೆ. ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಮೈಸೂರಿನ ಪಬ್ ನಲ್ಲಿ ಬೆಂಕಿ ಅವಘಡ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ. ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಯಾವುದೇ ಲೈಸನ್ಸ್ ಇಲ್ಲದೆ ಪಬ್ ನಡೆಯುತ್ತಿತ್ತು. ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೆ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಅಬಕಾರಿ ಜಿಲ್ಲಾಧಿಕಾರಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಅಕ್ರಮ ಹಾಗೂ ಲೈಸನ್ಸ್ ಇಲ್ಲದೆ ಬಾರ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ನಗರದ ಎಲ್ಲ ಕಮರ್ಷಿಯಲ್ ಕಟ್ಟಡಗಳಲ್ಲಿ ಫೈರ್ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಂಡಿರುವ ಕುರಿತು ಪರಿಶೀಲನೆ ನಡೆಸಲು ಮತ್ತು ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



