ಕೃಷಿಭೂಮಿ ಹಾನಿ ಮಾಡಿ ಬಿಡದಿ ಟೌನ್ ಶಿಪ್ ಮಾಡುವ ಬದಲು ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಲಿ: ಚೇತನ್ ಅಹಿಂಸಾ; Video
ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ಷಿಪ್ನಲ್ಲಿ ರೈತರ ಜಮೀನನ್ನು ಕಬಳಿಸಿ, ಕಾಂಕ್ರೀಟ್ ಕಾಡು ಮಾಡಲು ಹೊರಟಿದ್ದಾರೆ ಎಂದು ಚೇತನ್ ಅಹಿಂಸಾ ಆರೋಪಿಸಿದ್ದಾರೆ.

ಬೆಂಗಳೂರು ಸುತ್ತಮುತ್ತ ಫಲವತ್ತಾದ ಕೃಷಿಭೂಮಿಯನ್ನು ಕಸಿದುಕೊಂಡು ನಗರಾಭಿವೃದ್ಧಿ ಯೋಜನೆಗಳನ್ನು ವಿಸ್ತರಿಸುವ ಬದಲ, ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ ಗಮನ ಕೊಡಬೇಕು ಎಂದು ಕನ್ನಡ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೌನ್ ಶಿಪ್ ಹೆಸರಿನಲ್ಲಿ ಸರ್ಕಾರ ರೈತರ 9,600 ಎಕರೆ ಜಮೀನು ಕಬಳಿಸಲು ನೋಡುತ್ತಿದೆ. ಡಿ.ಕೆ.ಶಿವಕುಮಾರ್ ಅಂತ ಅಲ್ಲ. ಕಾಂಗ್ರೆಸ್ನಲ್ಲಿ ಎಂಎಲ್ಎ, ಎಂಪಿ ಯಾರಿಗೂ ದೂರದೃಷ್ಟಿ ಇಲ್ಲ. ಕರ್ನಾಟಕವನ್ನು ಅಭಿವೃದ್ಧಿ ಮಾಡಬೇಕು ಎನ್ನುವುದು ಯಾರ ಮನಸ್ಸಿನಲ್ಲಿಯೂ ಇದ್ದಂತಿಲ್ಲ, ಎಲ್ಲವನ್ನೂ ವ್ಯಾಪಾರ ದೃಷ್ಟಿಯಿಂದ ನೋಡುತ್ತಿದ್ದಾರೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ಷಿಪ್ನಲ್ಲಿ ರೈತರ ಜಮೀನನ್ನು ಕಬಳಿಸಿ, ಕಾಂಕ್ರೀಟ್ ಕಾಡು ಮಾಡಲು ಹೊರಟಿದ್ದಾರೆ. ಬೆಂಗಳೂರು ನಾಶ ಮಾಡಿದ್ದು ಸಾಕಾಗಲ್ಲ ಎಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯಮ ಕರ್ನಾಟಕ, ಹಳೆ ಮೈಸೂರು ನಾಶವಾಗ್ತಿದೆ. ಎಲ್ಲವನ್ನೂ ನೆಗ್ಲೆಕ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


