ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!
ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾನೆ.
ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.
ಮಂಗಳವಾರ ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲ ಕುಮಾರ್ ಊಟ ಮಾಡಿದ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



