ರಾಜ್ಯ

ಚಿನ್ನಯ್ಯ ಜೊತೆ ಗಿರೀಶ್ ಮಟ್ಟಣನವರ್ ಮಾತನಾಡಿಸಿದ್ದು ಒಪ್ಪಿಕೊಂಡ ಪ್ರಕಾಶ್ ರಾಜ್: Maskman ಚಿನ್ನಯ್ಯ ಹೇಳಿಕೆ ಸತ್ಯವಾಯ್ತು!

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿತ್ತು. ಈ ಬಗ್ಗೆ ಇಂದು ಪ್ರಕಾಶ್ ರಾಜ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ನಿಜವಾಗಿದೆ.

ಚಿನ್ನಯ್ಯ ಜೊತೆ ಗಿರೀಶ್ ಮಟ್ಟಣನವರ್ ಮಾತನಾಡಿಸಿದ್ದು ಒಪ್ಪಿಕೊಂಡ ಪ್ರಕಾಶ್ ರಾಜ್: Maskman ಚಿನ್ನಯ್ಯ ಹೇಳಿಕೆ ಸತ್ಯವಾಯ್ತು!
ಗಿರೀಶ್ ಮಟ್ಟಣ್ಣನವರ್, ಪ್ರಕಾಶ್ ರಾಜ್
Published On :

ಬೆಂಗಳೂರು: ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿತ್ತು. ಈ ಬಗ್ಗೆ ಇಂದು ಪ್ರಕಾಶ್ ರಾಜ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ನಿಜವಾಗಿದೆ.

ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್, ತಮಗೆ ಹಾಗೂ ಈ ಪ್ರಕರಣದ ಪ್ರಮುಖ ವ್ಯಕ್ತಿ ಎನ್ನಲಾದ ಚಿನ್ನಯ್ಯನಿಗೆ ಇರುವ ಲಿಂಕ್ ಏನು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ಅದೇ ರೀತಿ ಚಿನ್ನಯ್ಯನಿಗೆ ನೀನು ನನ್ನ ಮುಂದೆ ಹೇಳಿದ ಸತ್ಯವನ್ನು ಎಸ್‌ಐಟಿ ಮುಂದೆ ಹೋಗಿ ಹೇಳು. ಸತ್ಯ ಹೇಳಿದರೆ ಊರೇ ಕೊಂಡಾಡುತ್ತೆ. ನಾನು ನಿನ್ನ ತಬ್ಬಿಕೊಳ್ತಿನಿ ಎಂದು ಹೇಳಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಗಿರೀಶ್ ಮಟ್ಟಣನವರ್ ಮಾತನಾಡಿದ್ದು, ಹೌದು... ನಾನೇ ಕರೆ ಮಾಡಿ ಪ್ರಕಾಶ್ ರಾಜ್, ಚಿನ್ನಯ್ಯ ಜೊತೆ ಮಾತನಾಡಿಸಿದ್ದೆ ಎಂದು ಹೇಳಿದ್ದಾರೆ. ಇದನ್ನು ನೋಡಿದರೇ ಚಿನ್ನಯ್ಯ ಮಾಡಿದ ಷಡ್ಯಂತ್ರ ಆರೋಪಕ್ಕೆ ಪುಷ್ಠಿ ಸಿಕ್ಕಿದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.