ರಾಜ್ಯ

Bengaluru: ಬಾಲಕನ ಮೇಲೆ Rottweiler ನಾಯಿ ದಾಳಿ; ಮಾಲೀಕರ ವಿರುದ್ಧ ಪೊಲೀಸ್ ಕೇಸ್ ದಾಖಲು! Video

ಬೆಂಗಳೂರಿನ ಮಹಾದೇವಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ವಿಡಿಯೋ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

Bengaluru: ಬಾಲಕನ ಮೇಲೆ Rottweiler ನಾಯಿ ದಾಳಿ; ಮಾಲೀಕರ ವಿರುದ್ಧ ಪೊಲೀಸ್ ಕೇಸ್ ದಾಖಲು! Video
ಬಾಲಕನ ಮೇಲೆ ರಾಟ್ ವೀಲರ್ ನಾಯಿ ದಾಳಿ
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಕು ನಾಯಿಗಳ ದಾಳಿ ಪ್ರಕರಣ ಮುಂದುವರೆದಿದ್ದು, ರಸ್ತೆಯಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕ ಮೇಲೆ ರಾಟ್ ವೀಲರ್ ನಾಯಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಮಹಾದೇವಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ವಿಡಿಯೋ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ 12 ವರ್ಷದ ಬಾಲಕ ಜೂನ್ 13ರಂದು ವಸತಿ ಪ್ರದೇಶದ ರಸ್ತೆಯಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ವೇಳೆ ಮನೆಯೊಂದರಿಂದ ದಿಢೀರ್ ಓಡಿ ಬಂದ ರಾಟ್ ವೀಲರ್ ನಾಯಿ ಆತನ ಮೇಲೆ ದಾಳಿ ಮಾಡಿದೆ. ಸೈಕಲ್ ಬರುತ್ತಿದ್ದಂತೆಯೇ ಆತನ ಬೆನ್ನಟ್ಟಿದ ನಾಯಿ ಬಾಲಕನ ಕಾಲಿಗೆ ಕಚ್ಚಿದೆ. ದಾಳಿಯಿಂದ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲು!

ಇನ್ನು ಈ ಘಟನೆ ಸಂಬಂಧ ನಾಯಿಯ ಮಾಲೀಕರ ನಿರ್ಲಕ್ಷ್ಯದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಾಯಿಯನ್ನು ನಿಯಂತ್ರಣದಲ್ಲಿ ಇಡಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ವಿಫಲರಾದ ಆರೋಪದಡಿ ನಾಯಿಯ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಪರಿಶೀಲನೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.