ಗೃಹ ಸಚಿವರ ಸ್ವಕ್ಷೇತ್ರ ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು PSI ಆತ್ಮಹತ್ಯೆಗೆ ಶರಣು!
ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿ: ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
2014ರ ಬ್ಯಾಚ್ ಪಿಎಸ್‌ಐ ಬಸವರಾಜ ಹೆರೂರ್, ಮಂಗಳವಾರ ತಡರಾತ್ರಿ ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಮಾತನಾಡಿದ್ದರು. ಈ ಸುದ್ದಿಯನ್ನು ಸ್ನೇಹಿತರು ಅವರ ತಂದೆಗೆ ವಿಷಯ ತಿಳಿಸಿದ್ದು, ಅವರ ತಂದೆ ಮನೆಗೆ ಬಂದು ಬಾಗಿಲು ಒಡೆದು ನೋಡಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪಿಎಸ್ಐ ಈ ದುಡುಕಿನ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಆರ್. ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



