ರಾಜ್ಯ

'ಅವರು ಹೋಮ-ಹವನಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ದುಡ್ಡು ಹಾಕುತ್ತೇನೆ': ಪ್ರಕಾಶ್ ರಾಜ್

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

'ಅವರು ಹೋಮ-ಹವನಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ದುಡ್ಡು ಹಾಕುತ್ತೇನೆ': ಪ್ರಕಾಶ್ ರಾಜ್
ಪ್ರಕಾಶ್ ರಾಜ್
Published On :

ಬಹುಭಾಷಾ ನಟ ಪ್ರಕಾಶ್ ರಾಜ್ ನಾಸ್ತಿಕರು. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಅವರ ಹೆಸರು ಪ್ರಸ್ತಾಪಿಸಿದ್ದರಿಂದ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಲು ಅವರು ನಿನ್ನೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು ರಂಗಭೂಮಿಗೆ, ಫೀಸ್ ಕಟ್ಟಲು ಕಷ್ಟಪಡುವವರಿಗೆ ನೀಡುತ್ತೇನೆ. ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಡುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.