BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ
ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಮೊದಲ ಸುತ್ತಿನಲ್ಲಿಯೇ ಕಾಂಗ್ರೆಸ್ ನ ಐವರು ಅಭ್ಯರ್ಥಿಗಳ ಗೆಲುವು ಸಾಧಿಸಿದ್ದು ಪ್ರಜಾಪ್ರಭುತ್ವ ಗೆದ್ದಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಮೊದಲ ಸುತ್ತಿನಲ್ಲಿಯೇ ಕಾಂಗ್ರೆಸ್ ನ ಐವರು ಅಭ್ಯರ್ಥಿಗಳ ಗೆಲುವು ಸಾಧಿಸಿದ್ದು ಪ್ರಜಾಪ್ರಭುತ್ವ ಗೆದ್ದಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಮತ್ತು ಜನಪರ ನೀತಿಗಳ ಗೆಲುವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಕೆ ಹರಿಪ್ರಸಾದ್, ಶಿವಣ್ಣ ಬಿ.ಎಸ್, ಪಿ.ವಿ ಮೋಹನ್, ತಿಪ್ಪಣ್ಣಪ್ಪ ಕಾಮಕ್ನೂರ್, ವಿನಯ್ ಕಾರ್ತಿಕ್ ಗೆಲುವು ಸಾಧಿಸಿದ್ದು ಐವರಿಗೂ ಸುರ್ಜೇವಾಲಾ ಅಭಿನಂದನೆ ತಿಳಿಸಿದ್ದಾರೆ.
ಭಾರೀ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನ ಲಭಿಸಿವೆ. ಆದರೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ ಭಾರಿ ಆಘಾತ ಎದುರಾಗಿದ್ದು, ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ನಿಂದ ಅಡ್ಡ ಮತದಾನ ಆಗಿರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
ಯಾರಿಗೆಷ್ಟು ಮತಗಳು?
ಕಾಂಗ್ರೆಸ್ ಪಕ್ಷದ ಬಿ.ಕೆ. ಹರಿಪ್ರಸಾದ್ -30 ಮತಗಳು, ತಿಪ್ಪಣ್ಣಪ್ಪ ಕಮಕನೂರು-30 ಮತಗಳು, ಪಿ.ವಿ.ಮೋಹನ್-29 ಮತಗಳು, ಬಿ.ಎಸ್.ಶಿವಣ್ಣ-30 ಮತಗಳು ಮತ್ತು 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಲಭಿಸಿವೆ ಎಂದು ತಿಳಿದುಬಂದಿದೆ. ಇತ್ತ ಬಿಜೆಪಿಯ ಅಭ್ಯರ್ಥಿಗಳಾದ ಆರ್.ರಘುಗೆ 29 ಮತಗಳು ಮತ್ತು ಲಿಂಗರಾಜು ಪಾಟೀಲ್ಗೆ 27 ಮತಗಳು ಲಭಿಸಿವೆ. ಅಂತೆಯೇ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



