ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ: ಕುಕ್ಕರ್ ನಿಂದ ಹೊಡೆದು ಹತ್ಯೆ!
ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.
ಆರೋಪಿ ಪತಿ ಮಂಜುನಾಥ್ 24 ವರ್ಷದ ಸಹನಾಳನ್ನು ಹತ್ಯೆ ಮಾಡಿದ್ದಾನೆ. ದಂಪತಿಗೆ ಇಬ್ಬರು ಗಂಡುಮಕ್ಕಳಿದ್ದು ಮದುವೆಯಾದಾಗಿನಿಂದ ಪದೇ ಪದೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು. ನಿನ್ನೆ ಸಹನಾ ತನ್ನ ತಾಯಿ ಜಯಮ್ಮಗೆ ವಿಡಿಯೋ ಕಾಲ್ ಮಾಡಿ ತನ್ನ ಪತಿ ಹೊಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಇನ್ನು ತಡರಾತ್ರಿ ಪತಿ ಮಂಜುನಾಥ್ ಪತ್ನಿ ತಲೆಗೆ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿ ನಂತರ ನೇಣು ಬಿಗಿದಿದ್ದಾನೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



